
ಶಿವಮೊಗ್ಗ : ನಗರದ ಗಾಂಧಿ ಬಜಾರ್ ನ ಮೊದಲ ತಿರುವಿನ ಮನೆಯೊಂದರಲ್ಲಿ ಶುಕ್ರವಾರ ಸಂಜೆ ರೌಡಿ ಶೀಟರ್ ಓರ್ವನ ಭೀಕರ ಹತ್ಯೆ ನಡೆದಿದೆ. ನರಸಿಂಹ (೩೬) ಮೃತ ವ್ಯಕ್ತಿ. ರೌಡಿಶೀಟರ್ ಅಂಬು ಮತ್ತು ಆತನ ಸಹಚರರು ಈ ಹತ್ಯೆ ನಡೆಸಿರಬಹುದು ಎಂದು ಪ್ರಾಥಮಿಕ ವರದಿ ತಿಳಿಸಿದೆ. ಗಾಂಧಿ ಬಜಾರ್‌ನಲ್ಲಿ ಕೆಲವರ ನಡುವೆ ಏಕಾಏಕಿ ಗಲಾಟೆ ಉಂಟಾಗಿ, ಬಳಿಕ ದುಷ್ಕರ್ಮಿಗಳು ಮಚ್ಚು, ಲಾಂಗ್‌ಗಳAತಹ ಮಾರಕಾಸ್ತçಗಳಿಂದ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಟೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಈ ಹತ್ಯೆಗೆ ಅಕ್ರಮ ಇಸ್ಪೀಟ್ ಅಡ್ಡೆಗಳ ಚಟುವಟಿಕೆಗಳು ಕಾರಣವೇ, ಹಳೆಯ ವೈಷಮ್ಯ ಹಿನ್ನೆಲೆಯೇ ಅಥವಾ ಇತರೆ ಯಾವುದೇ ಕಾರಣಗಳಿವೆಯೇ ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯ ವಲಯಗಳಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೂ, ಅವುಗಳ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ.
ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬAಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರ ಸಾಕ್ಷ÷್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಾರ್ವಜನಿಕರಲ್ಲಿ ಆತಂಕ
ಜನನಿಬಿಡ ಗಾಂಧಿ ಬಜಾರ್ ಪ್ರದೇಶದಲ್ಲೇ ಇಂತಹ ಭೀಕರ ಹತ್ಯೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಗರದ ಹೃದಯ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ನಿರ್ಭೀತಿಯಾಗಿ ನಡೆಯುತ್ತಿವೆಯೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಅಕ್ರಮ ಜೂಜಾಟ ಹಾಗೂ ಇಸ್ಪೀಟ್ ಅಡ್ಡೆಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.








