ಚಿತ್ರದುರ್ಗ
ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಆಡಳಿತದಲ್ಲಿ ಬದಲಾವಣೆಯಾಗಿದ್ದು, ಸುಪ್ರೀಂ ಕೋರ್ಟ್ ಗಡುವು ನೀಡಿದ ನಿರ್ದೇಶನದಂತೆ ರಾಜ್ಯ ಸರ್ಕಾರ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿದೆ. ಸಮಿತಿಯನ್ನು ನೇಮಕ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಫೆಬ್ರವರಿ 27ರಂದು ಸುಪ್ರೀಂ ಕೋರ್ಟ್ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಮೂರು ದಿನಗಳಲ್ಲಿ ಸಮಿತಿ ರಚನೆ ಮಾಡಲು ಆದೇಶಿಸಿತ್ತು. ಅದರಂತೆ ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಇನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಜೈಲು ಸೇರಿ, ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ಮುರುಘಾ ಶರಣರು ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹಿರಿಯೂರಿನ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಮಹತ್ವದ ತೀರ್ಪು ನೀಡಿ, ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಅದರಂತೆಯೇ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ