ಬೆಂಗಳೂರು:
ಕೊರೋನಾ ಕಾರಣದಿಂದಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವ ಕಾರಣಕ್ಕಾಗಿ ಕಳೆದ 2 ವರ್ಷಗಳಿಂದ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡುತ್ತಾ ಬಂದಿತ್ತು. ಆದ್ರೇ.. ಇದೀಗ ವಿದ್ಯುತ್ ದರ ಏರಿಕೆಗೆ ಅನುಮತಿಸಿದ ಕಾರಣ, ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ.
ಈ ಕುರಿತಂತೆ ಇಂದು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ, ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಪ್ರತಿ ಯೂನಿಟ್ ಗೆ ವಿದ್ಯುತ್ ದರವನ್ನೂ 1.39ರಷ್ಟು ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದ್ರೇ. 35 ಪೈಸೆ ದರವನ್ನು ಏರಿಕೆ ಮಾಡಿದೆ…
ಇಂಧನ ದರ, ಅಗತ್ಯ ವಸ್ತುಗಳ ದರ ಏರಿಕೆ ನಂತ್ರ, ಈಗ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬರೆ ಶಾಕ್ ಇಂದು ಸಿಗಲಿದೆ. ಪ್ರತಿ ಯೂನಿಟ್ ಗೆ ಎಷ್ಟು ದರ ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ಕೆ ಇ ಆರ್ ಸಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದೆ.
ಅಂದಹಾಗೇ, 2009ರಂದು ಪ್ರತಿ ಯೂನಿಟ್ ಗೆ 34 ಪೈಸೆ ಏರಿಕೆ ಮಾಡಲಾಗಿತ್ತು. 2010ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ, 2011ರಲ್ಲಿ 28 ಪೈಸೆ, 2012ರಲ್ಲಿ 13 ಪೈಸೆ, 2017ರಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ, 2019ರಲ್ಲಿ 35 ಪೈಸೆ, 2020ರಲ್ಲಿ 30 ಪೈಸೆ ಹಾಗೂ 2020ರಲ್ಲಿ 30 ಪೈಸೆ ಪ್ರತಿ ಯೂನಿಟ್ ಗೆ ವಿದ್ಯುತ್ ದರವನ್ನು ಪರಿಷ್ಕರಿಸಲಾಗಿತ್ತು. ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದೆ.
ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ