ಬೆಂಗಳೂರು :
ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.
ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದ್ರ ಸೋಮವಾರದವರೆಗ ಕಾಯಲೇಬೇಕು.
ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. ಇಂದಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ.
ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ