WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್

ಬೆಂಗಳೂರು:

    ಮಹಿಳಾ ಪ್ರೀಮಿಯರ್ ಲೀಗ್ (WPL) 2025ರಲ್ಲಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಆರಂಭದಲ್ಲೇ ಭಾರಿ ಆಘಾತ ಎದುರಾಗಿದ್ದು ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ದೂರ ಉಳಿಯುವಂತಾಗಿದೆ.

   ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇದೀಗ ಇಡೀ ಟೂರ್ನಿಗೆ ಅಲಭ್ಯರಾಗಿದ್ದಾರೆ. ಈ ವರೆಗೂ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್​ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ. ಕಳೆದ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ಕನ್ನಡತಿ ಶ್ರೇಯಾಂಕಾ ಕೊಡುಗೆ ಅಮೂಲ್ಯವಾಗಿತ್ತು. ಆದರೆ ಈ ಬಾರಿ ಶ್ರೇಯಾಂಕಾ ಪಾಟೀಲ್ ತಂಡದ ದೂರ ಉಳಿಯುವಂತಾಗಿದೆ.

   ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಕ್ಕೆ ಕಾರಣ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಈ ಗಾಯದ ಸಮಸ್ಯೆಯ ಕಾರಣ ಅವರು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

  ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಶ್ರೇಯಾಂಕಾ ಪಾಟೀಲ್ 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಪ್ರವಾಸ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ ನಿಂದಲೂ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Recent Articles

spot_img

Related Stories

Share via
Copy link