ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ನಾಳೆ ಗ್ರಾಜ್ಯುವೇಷನ್ ದಿನ

ತುಮಕೂರು:

ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಹನ್ನೆರಡನೇ ಪದವಿ ಪ್ರದಾನ ಸಮಾರಂಭವನ್ನು ನಾಳೆ ಶನಿವಾರ ನಡೆಯಲಿದೆ ಎಂದು ಎಸ್ಐಜಿ ಕಾಲೇಜಿನ ನಿರ್ದೇಶಕರಾದ ಎಂ.ಎನ್.ಚನ್ನಬಸಪ್ಪ ತಿಳಿಸಿದರು.

ನಗರದ ಎಸ್ ಐಟಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಸಿದ್ದಗಂಗಾ ಎಜುಕೇಶನ್ ಸೊಸೈಟಿಯ ಪೂಜ್ಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪುಣೆಯ ಭಾರತ್ ಫೋರ್ಜ್ ಲಿಮಿಟೆಡ್ ಅಧ್ಯಕ್ಷರಾದ ಬಾಬಾಸಾಹೇಬ್ ನೀಲಕಂಠ ಕಲ್ಯಾಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಪ್ರದಾನ ಸಮಾರಂಭ ಭಾಷಣ ಮಾಡಲಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ

ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಎಸ್.ಐ.ಟಿ. ಯ ಆಡಳಿತ ಮಂಡಳಿ, ಅಕಾಡೆಮಿಕ್ ಕೌನ್ಸಿಲ್ಸ್ ಪ್ರತಿಷ್ಠಿತ ಸದಸ್ಯರು ಮತ್ತು ವಿದ್ಯಾರ್ಥಿಗಳು ಮತ್ತು ಪದವೀಧರರ ಪೋಷಕರೊಂದಿಗೆ ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಆಹ್ವಾನಿತರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

 ರಾಜ್ಯದ ಶಾಲೆಗಳಲ್ಲಿ ಪುಸಕ್ತ ಶೈಕ್ಷಣಿಕ ವರ್ಷದಿಂದಲೇ `ಭಗವದ್ಗೀತೆ’ ಬೋಧನೆ!

ಎಂಬಿಎಯ 93 ಅಭ್ಯರ್ಥಿಗಳು, ಎಂಸಿಎಯ 58 ಅಭ್ಯರ್ಥಿಗಳು, ಎಂಟೆಕ್ನ 50 ಅಭ್ಯರ್ಥಿಗಳು ಮತ್ತು ಎಂಜಿನಿಯರಿಂಗ್ ಕಾರ್ಯಕ್ರಮಗಳ 833 ಅಭ್ಯರ್ಥಿಗಳು ಮತ್ತು ಬಿಆರ್ಕ್ನ 62 ಅಭ್ಯರ್ಥಿಗಳು ಪದವಿಯನ್ನು ಪಡೆಯಲಿದ್ದಾರೆ. ನಮ್ಮ ಸಂಸ್ಥೆಯಿಂದ ಮತ್ತು ದಾನಿಗಳಿಂದ 34 ಚಿನ್ನದ ಪದಕಗಳನ್ನು ಇಡಲಾಗಿದೆ.

ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ

ಶ್ರೀ ರಾಚುರ್ ಅಕ್ಷಿತ್ (ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್) ಅವರು ಸಂಸ್ಥೆಯ ಟಾಪರ್ ಆಗಿದ್ದಕ್ಕಾಗಿ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಚಿನ್ನದ ಪದಕವನ್ನು ಪ್ರದಾನ ಮಾಡಲಾಗುವುದು. ಇದಲ್ಲದೆ, ಅವರು ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಟಾಪರ್ ಆಗಿದ್ದಕ್ಕಾಗಿ ಇನ್ನೂ ಎರಡು ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ.

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap