ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ : ಸಿದ್ದರಾಮಯ್ಯ

ಬೆಂಗಳೂರು: 

    ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link