ಸಿಎಂ ಸಿದ್ದರಾಮಯ್ಯ ರಿಟ್‌ ಅರ್ಜಿ ವಿಚಾರಣೆ ಮ 2:30ಕ್ಕೆ….!

ಬೆಂಗಳೂರು

   ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ಇದನ್ನು ಪ್ರಶ್ನಿಸಿ ರವಿವರ್ಮ ಕುಮಾರ್‌ ಅವರು ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.. ಇಂದು ಮಧ್ಯಾಹ್ನ 2.30ಕ್ಕೆ ಈ ಅರ್ಜಿ ವಿಚಾರಣೆಗೆ ಬರಲಿದೆ.ಹೀಗಾಗಿ ಹೈಕೋರ್ಟ್‌ ಆದೇಶದತ್ತ ಎಲ್ಲರ ಚಿತ್ತ ನೆಟ್ಟಿದೆ. 

  ಇನ್ನು ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌, ಅಭಿಷೇಕ್‌ ಮನು ಸಿಂಘ್ವಿ, ಕಪಿಲ್‌ ಸಿಬಲ್‌ ಬೆಂಗಳೂರಿಗೆ ಬಂದಿದ್ದಾರೆ.. ಅವರು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಾರೆ. ಮಧ್ಯಾಹ್ನದ ನಂತರ ಸಿಎಂ ಸಿದ್ದರಾಮಯ್ಯ ಅವರು ಈ ಮೂವರು ವಕೀಲರನ್ನು ಭೇಟಿಯಾಗಲಿದ್ದಾರೆ.. ಅವರಿಂದ ಕಾನೂನು ಸಲಹೆಯನ್ನು ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.