ಬೆಂಗಳೂರು:
ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎನ್ನುವ ಬಿಜೆಪಿ ನಾಯಕರಿಗೆ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು”ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ.
