ಬೆಂಗಳೂರು :
ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಅವರು ಮನುಷ್ಯರೇ ಅಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮಣಿ ಅವರು ಬರೆದಿರುವ 28 ಅಂಕಣಗಳನ್ನು ಒಳಗೊಂಡ “ಮನು ಭಾರತ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ ಎಂದು ಕಿಡಿ ಕಾರಿದರು.
ವಿದ್ಯಾವಂತರು ವೈಚಾರಿಕತೆ, ಜಾತ್ಯಾತೀತ ಮನೋಭಾವ ಬೆಳೆಸಿಕೊಂಡಿಲ್ಲ. ಯಾವ ರೀತಿಯ ಶಿಕ್ಷಣವನ್ನು ಅವರು ಪಡೆದುಕೊಂಡಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ. ವಿದ್ಯಾವಂತರು ಎನಿಸಿಕೊಂಡವರು ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಆದರೆ, ಮನುವಾದಿಗಳು ಸಂವಿಧಾನಕ್ಕೆ ವಿರುದ್ಧವಾಗಿರುವವರು. ಅದಕ್ಕಾಗಿಯೇ ಸಂವಿಧಾನ ಬದಲಾವಣೆ ಆಗಬೇಕು ಎನ್ನುತ್ತಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ