ಅಗತ್ಯ ಬಿದ್ದರೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 

    ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ. ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಕೂಡಾ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು.

Recent Articles

spot_img

Related Stories

Share via
Copy link