ತಮಿಳು ನಾಡಿಗೆ ನೀರು ಬಿಡಬಾರದೆಂಬ ದುರುದ್ದೇಶ ನಮಗಿಲ್ಲ : ಸಿಎಂ

ನವದೆಹಲಿ

    ರಾಜ್ಯದಲ್ಲಿ ತೀವ್ರ ಬರಗಾಲ ನಡುವೆ ತಮಿಳು ನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಇಂದು ಬುಧವಾರ ರಾಜ್ಯದ ಸರ್ವಪಕ್ಷಗಳ ಸಂಸದರು, ಕೇಂದ್ರ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಭೆ ನಡೆಸಿದರು.

      ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟು ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಕಳೆದ 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ಕಾವೇರಿ ನೀರಿನ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ಆದೇಶ ಇದೆ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕೆಂದು ತಿಳಿಸಿಲ್ಲ. ಸಂಕಷ್ಟದ ಸೂತ್ರ ಏನು ಎಂಬುದು ತಯಾರಿಯಾಗಿಲ್ಲ ಎಂದರು.

    ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಮುಂದೆ ಮಳೆ ಬರುವ ಆಶಾದಾಯಕವಾಗಿಲ್ಲ. ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್​ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ ಎಂದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap