ಮೇಕೆದಾಟು ಯೋಜನೆ ನೀರಿನ ಸಮಸ್ಯೆ ಬಗೆಹರಿಸಬಹುದು : ಸಿ ಎಂ

ಮೈಸೂರು:

       ಮೇಕೆದಾಟು ಯೋಜನೆ ಸಮಸ್ಯೆ ಇತ್ಯರ್ಥದಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು.ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

        ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ. ಜನರ ಹಿತಕ್ಕಾಗಿ ಹೋರಾಟ, ಪ್ರತಿಭಟನೆ, ಬಂದ್ ಮಾಡಲಿ, ಆದರೆ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಎಂಬುದು ಸರಿಯಲ್ಲ ಎಂದರು.

        ಬಿಜೆಪಿಯವರನ್ನು ಮೊದಲು ನಾವು ಚಡ್ಡಿಗಳು ಎಂದು ಕರೆಯುತ್ತಿದ್ದೆವು. ಪ್ರತಿಭಟನೆ ಮಾಡಲಿ, ಆದರೆ ರಾಜಕೀಯ ಮಾಡಬಾರದು. 

       ಕಾವೇರಿ ನೀರು ವಿಚಾರವಾಗಿ ಹೆಚ್​ಡಿ ದೇವೇಗೌಡರು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರವನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದ್ದು ಬಿಜೆಪಿ ಜೊತೆಗೆ ಹೊಸ ಪ್ರೇಮ ಬೆಳದಿದೆ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ.

     ಸರ್ಕಾರ ಎಲ್ಲಾ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪಗಳು ಸುಳ್ಳು. ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇದೆ. ಅವರೇ ವಾದ ಮಾಡಿದ್ದಾರೆ. ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ. ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ‌ ಎಂದು ಹೇಳಿದರು.

     ಕಾವೇರಿ ನೀರು ಸಮಸ್ಯೆಯನ್ನು ಸಂಕಷ್ಟ ಸೂತ್ರದಿಂದಲೂ ಬಗೆಹರಿಸಬಹುದು ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ವಿರುದ್ಧವಾಗಿದ್ದ ಶಕ್ತಿಗಳು ಈ ಬಾರಿ ಒಂದುಗೂಡಿವೆ. ಬಿಜೆಪಿಯವರು ಕಳೆದ 9 ವರ್ಷಗಳಲ್ಲಿ ಭಾವನಾತ್ಮಕವಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೆ ಈ ಸತ್ಯ ತಿಳಿದ ಮೇಲೆ ಅನೇಕ ಶಕ್ತಿಗಳು ಇಂದು ಬಿಜೆಪಿಯೇತರ ಗುಂಪುಗಳಲ್ಲಿ ಗುರುತಿಸಿಕೊಳ್ಳುತ್ತಿವೆ ಎಂದು ಹೇಳಿದರು.

     ಹಿಂದೆ ಬಿಜೆಪಿಯವರು ತಮಿಳು ನಾಡಿನಲ್ಲಿ ಎಡಿಎಂಕೆ ಜೊತೆ ಮೈತ್ರಿ ಹೊಂದಿದ್ದರಲ್ಲವೇ ಹಾಗಾದರೆ ಆಗ ಕಾವೇರಿ ನೀರು ಸಮಸ್ಯೆ ಬಗೆಹರಿಸಬಹುದಿತ್ತಲ್ಲವೇ, ಈಗ ನಮ್ಮನ್ನು ತಮಿಳು ನಾಡಿನ ಡಿಎಂಕೆಯ ಬಿ ಟೀಂ ಎಂದು ಕರೆಯುವುದೇಕೆ ಎಂದು ಪ್ರಶ್ನಿಸಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap