ಮೇ 20ಕ್ಕೆ ಮಧ್ಯಾಹ್ನ 12:30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ಸ್ವೀಕಾರ

ಬೆಂಗಳೂರು:

      ಕರ್ನಾಟಕದಲ್ಲಿ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಗಳಿಸಿದ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌  ಹಿಂದುಳಿದ ವರ್ಗದ ಆಶಾಕಿರಣ ಎಂದೇ ಖ್ಯಾತರಾದ ಜನನಾಯಕ ಶ್ರೀ ಸಿದ್ದರಾಮಯ್ಯ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ .

   ಇನ್ನು ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪ್ರಥಮ ಕ್ಯಬಿನೆಟ್‌ ನಲ್ಲಿ  ಎಲ್ಲಾ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.ಇನ್ನೂ ಎರಡು ದಿನದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಅವರು ಇಂದು ಸಿಎಂ ಆಗಿಯೇ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ತಯಾರಿ ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

    ಮೇ 10 ರಂದು ನಡೆದ ಚುನಾವಣೆಯಲ್ಲಿ, 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದರೆ, ಆಡಳಿತಾರೂಢ ಬಿಜೆಪಿ ಎರಡನೆ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ ಮತ್ತು ಜನತಾ ದಳ (ಜಾತ್ಯತೀತ) 20 ಸ್ಥಾನಗಳನ್ನು ಪಡೆದಿದೆ.

     ಸಿದ್ದರಾಮಯ್ಯ ಮೈಸೂರಿನವರು ಮತ್ತು ಕುರುಬ ಸಮುದಾಯಕ್ಕೆ ಸೇರಿದವರು, ರಾಜಕೀಯವಾಗಿ ಒಕ್ಕಲಿಗರು ಮತ್ತು ಲಿಂಗಾಯತರ ನಂತರ ಅತ್ಯಂತ ಪ್ರಮುಖರು ಎಂದು ಪರಿಗಣಿಸಲಾಗಿದೆ. ಅವರು 1983 ರಲ್ಲಿ ಭಾರತೀಯ ಲೋಕದಳ ಟಿಕೆಟ್‌ನಲ್ಲಿ ಶಾಸಕಾಂಗ ಸಭೆಯನ್ನು ಪ್ರವೇಶಿಸಿದಾಗ ಅವರ ರಾಜಕೀಯ ಜೀವನ ಪ್ರಾರಂಭವಾಯಿತು.

      ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಜನತಾ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದರು. ಅವರು 1985 ರಲ್ಲಿ ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆಗಳ ಸಚಿವರಾದರು. ಅಂದಿನಿಂದ ಅವರು ರೇಷ್ಮೆ ಕೃಷಿ, ಪಶುಸಂಗೋಪನೆ ಮತ್ತು ಸಾರಿಗೆಯಂತಹ ಖಾತೆಗಳನ್ನು ನಿರ್ವಹಿಸಿದ್ದಾರೆ.

       2008 ರ ಕರ್ನಾಟಕ ಚುನಾವಣೆಯ ನಂತರ, ಸಿದ್ದರಾಮಯ್ಯ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಯಿತು. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರದ ನೇತೃತ್ವ ವಹಿಸಿದ್ದರು.ಮತ್ತು ಪೂರ್ಣಾವಧಿ ಮುಗಿಸಿದ ಕರ್ನಾಟಕದ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಗಣ್ಯ ಮತ್ತು ಸ್ವಚ್ಚ ಆಡಳಿತಕ್ಕೆ ಹೆಸರಾಗಿದ್ದಾರೆ.

       ಇನ್ನು ಇವರೊಂದಿಗೆ ಸಿಎಂ ರೇಸ್‌ ನಲ್ಲಿದ್ದ ರಾಜ್ಯ ರಾಜಕೀಯದಲ್ಲಿ  ಕನಕಪುರದ ಬಂಡೆ ಎಂದೇ ಖ್ಯಾತರಾದ ಡಿ ಕೆ ಶಿವಕುಮಾರ ತಮ್ಮ ವ್ಯೂಹಾತ್ಮಕ ಚಾಕಚಕ್ಯತೆಯಿಂದ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದರು .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap