ಬೆಂಗಳೂರು :
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಆತ್ಮನಿರ್ಬರ ಅಲ್ಲ, ಆತ್ಮ ಬರ್ಬರ ಬಜೆಟ್ ಆಗಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “ ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು. 1/19#Budget2021
— Siddaramaiah (@siddaramaiah) February 1, 2021
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “ ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು ಎಂದಿದ್ದಾರೆ.
ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರ ಬೆಳೆಗೆ ಬೆಲೆ ಇಲ್ಲದೆ ದಿವಾಳಿ ಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ. 2/19#Budget2021
— Siddaramaiah (@siddaramaiah) February 1, 2021
ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರ ಬೆಳೆಗೆ ಬೆಲೆ ಇಲ್ಲದೆ ದಿವಾಳಿ ಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ. ಕೋವಿಡ್ ನಿಂದಾಗಿ ಹಲವು ಕೈಗಾರಿಕೆಗಳು ಮುಚ್ಚಿ ಹೋಗಿದ್ದವು. ಈ ಕೈಗಾರಿಕೆಗಳನ್ನು ಪುನರಾರಂಭಿಸುವ ಬಗ್ಗೆ ಒತ್ತು ನೀಡಿಲ್ಲ.
ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಿಸಿಲ್ಲ. 7/19#Budget2021
— Siddaramaiah (@siddaramaiah) February 1, 2021
ಇನ್ನು ಕೃಷಿ ಸೆಸ್ ವಿಧಿಸಿದ್ದಾರೆ. ಶೇಕಡಾ ಎರಡುವರೆಯಿಂದ 100ವರೆಗೆ ಸೆಸ್ ವಿಧಿಸಿದ್ದಾರೆ. ಬೆಳೆ, ಯಂತ್ರೋಪಕರಣಗಳ ಮೇಲೆ ಕೃಷಿ ಸೆಸ್ ಹಾಕಲಾಗಿದೆ. ಅದರ ಬದಲು ರೈತರಿಗೆ ಬಡ್ಡಿಯಿಲ್ಲದೇ ಸಾಲ ನೀಡಬಹುದಿತ್ತು. ಕೆಂದ್ರ ಸರ್ಕಾರ ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ರೈತರ ಅಭಿವೃದ್ಧಿಗೆ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಇದು ಯಾವ ರೀತಿ ಅರ್ಥವ್ಯವಸ್ಥೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ