ಬೆಂಗಳೂರು:
ಉಡುಪಿ (Udupi) ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ (Hijab) ವಿವಾದ ತಾರಕಕ್ಕೇರಿದ್ದು, ಇದು ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ. ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ನವರು ಬಿಜೆಪಿ(BJP) ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ.
ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ’ ಅಂತಾ ಹೇಳಿದ್ದಾರೆ.
ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
