ಮುಖ್ಯಮಂತ್ರಿ ಗೊಂಧಲಕ್ಕೆ ಕೊನೆಗೂ ತೆರೆ : ಮತ್ತೊಮ್ಮೆ ಸಿದ್ದರಾಮಯ್ಯ ಆಯ್ಕೆ

ನವದೆಹಲಿ

     ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡನೇ ಬಾರಿಗೆ ಅಹಿಂದ ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿದ್ದಾರೆ.

      ಕಳೆದ ರಾತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದು ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ತೀರ್ಮಾನಿಸಿದರು. ಪಟ್ಟು ಬಿಡದೆ ಹಠ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹ ಹೈಕಮಾಂಡ್ ತೀರ್ಮಾನಕ್ಕೆ ಒಪ್ಪಿಕೊಂಡಿದ್ದಾರೆ. 

    ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. 

        ನೂತನ ಮುಖ್ಯಮಂತ್ರಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap