ಅಮಿತ್‌ ಶಾ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು

      ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಭೇಟಿ ನೀಡಿ ಅಲ್ಲಿ ಅವರು ಮಾಡಿದ ಭಾಷಣದ ತುಣುಕನ್ನು  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

      ಅಮಿತ್ ಶಾ ನೀಡಿದ, “ಗುಜರಾತ್ ಜನರು ಅಡಿಕೆ ತಿಂದರೆ ದಕ್ಷಿಣ ಕನ್ನಡದ ಜನರು ಅಡಿಕೆ ಬೆಳೆಯುತ್ತಾರೆ” ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. “ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು” ಎಂದು ಟ್ವೀಟ್‌ ಮಾಡಿದ್ದಾರೆ.

     ಭಾನುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ದಕ್ಷಿಣ ಕನ್ನಡದವರು ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನವರು ಈ ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು” ಎಂದು ಟೀಕಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ