ಆರ್‌ ಅಶೋಕ್‌ ಟ್ವೀಟ್‌ ಗೆ ಸಿದ್ದರಾಮಯ್ಯ ತಿರುಗೇಟು …..!

ಬೆಂಗಳೂರು: 

     ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ, ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

     ಈ  ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಫೇಸ್ ಬುಕ್ ನಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, ಸ್ವಾಮಿ ವಿರೋಧ ಪಕ್ಷದ ನಾಯಕ ಅವರೇ, ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್.ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ ಎಂದು ಲೇವಡಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap