ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ:ಡಾ|| ಜಿ . ಪರಮೇಶ್ವರ್

ತುಮಕೂರು:

    ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುತ್ತಾರೆ. ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ  ಗುರುವಾರ ಹೇಳಿದ್ದಾರೆ.

  ಬದಲಾವಣೆ ಆಗುತ್ತದೆ ಎಂದು ಯಾರು ಹೇಳಿದರು? ಅದು ವದಂತಿ. ಸಿದ್ದರಾಮಯ್ಯ ಸದ್ಯ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಅವರು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಭಾವಿಸುತ್ತೇವೆ. ಅವರೇ ಅದನ್ನು ಹೇಳಿದ್ದಾರೆ ಎಂದು ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

   ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಸಿದ್ದರಾಮಯ್ಯ ಸ್ವತಃ ಹೇಳಿದ್ದಾರೆ. ಯಾವುದೇ ಕ್ರಾಂತಿ ಇರುವುದಿಲ್ಲ, ಎಲ್ಲವೂ ಶಾಂತಿಯುತವಾಗಿರುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

   ತಮ್ಮ ಎರಡನೇ ಅವಧಿಯಲ್ಲಿ 2.5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೇನೆ ಮತ್ತು ಉಳಿದ 2.5 ವರ್ಷಗಳ ಕಾಲವೂ ಆ ಹುದ್ದೆಯಲ್ಲಿಯೇ ಇರುತ್ತೇನೆ ಎಂದು ಬುಧವಾರ ಸಿದ್ದರಾಮಯ್ಯ ಅವರು ಹೇಳುವ ಮೂಲಕ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದು ಪ್ರತಿಪಾದಿಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಎಚ್ಚರಿಕೆ ನೀಡಿದ್ದರು.

Recent Articles

spot_img

Related Stories

Share via
Copy link