ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ.ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು, ನಿರಾಪರಾಧಿಗಳ ಮೇಲೆ ಕ್ರಮ ಬೇಡ ಎಂದು ಹೇಳಿದ್ದೀನಿ.
ಕೇಜ್ರೀವಾಲ್ ಅವರು ರಾಜ್ಯ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ತೀರ್ಮಾನವನ್ನು ಜನಗಳಿಗೆ ಬಿಡೋಣ, ಈ 40% ಕಮಿಷನ್ ಸರ್ಕಾರವನ್ನು ಕಿತ್ತು ಹಾಕಿ ಎಂದು ನಾವೂ ಹೇಳುತ್ತಿದ್ದೀವಿ, ಜನರೇ ತೀರ್ಮಾನ ಮಾಡಲಿ.
PSI ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ
ಆಪ್ ಪಕ್ಷದ ಬಗ್ಗೆ ನಾನು ಮಾತನಾಡಲ್ಲ, ಅದು ಕೂಡ ಬಹಳ ವರ್ಷಗಳಿಂದ ರಾಜಕೀಯದಲ್ಲಿದೆ. ದೊಡ್ಡ ಪಕ್ಷ ಅದು. ರಾಜ್ಯದಲ್ಲಿ ಅವರು ಇವತ್ತಿನವರೆಗೆ ಚುನಾವಣೆ ಎದುರಿಸಿರಲಿಲ್ಲ, ಕೇಜ್ರೀವಾಲ್ ಬಂದು ನಮ್ಮ ಅಭ್ಯರ್ಥಿಗಳನ್ನು ಚುನಾವಣೆಗೆ ಹಾಕ್ತೀವಿ ಎಂದಿದ್ದಾರೆ, ಹಾಕಲಿ ಜನ ತೀರ್ಮಾನ ಮಾಡುತ್ತಾರೆ.
ಯಾರೊ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆ ಎಂದರೆ ಎಲ್ಲಾ ಮೌಲ್ವಿಗಳು ತಪ್ಪು ಮಾಡ್ತಾರೆ ಎಂದು ಅರ್ಥವಲ್ಲ. ಅವರು ಮೌಲ್ವಿ ಹೌದೋ ಅಲ್ಲವೋ ಎಂಬುದು ನನಗೂ ಗೊತ್ತಿಲ್ಲ. ಇದರಿಂದ ಇನ್ನಷ್ಟು ಕೆಸರೆರಚುವ ಕೆಲಸ ಮಾಡುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸುವ ಕೆಲಸ ಸರ್ಕಾರ ಮಾಡಬೇಕು. ಶಾಂತಿ ಕದಡುವ ಪ್ರಯತ್ನ ಯಾರೂ ಮಾಡಬಾರದು.ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪರವಾಗಿ ರಾಜ್ಯದ ಚುನಾವಣೆ ಕಾರ್ಯತಂತ್ರ ರೂಪಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ವೈಯಕ್ತಿಕವಾಗಿ ಮಾಹಿತಿ ಇಲ್ಲದೆ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ