ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯಮಂತ್ರಿಗಳು ಅನಿರೀಕ್ಷಿತವಾಗಿ ಆಸ್ಪತ್ರೆಗೆ ಬಂದದ್ದನ್ನು ಕಂಡ ವೈದ್ಯರು, ಸಿಬ್ಬಂದಿ ತಬ್ಬಿಬ್ಬಾದರು. ಈ ವೇಳೆ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಸಿಎಂ ಮಾಹಿತಿ ಪಡೆದರು. ಸಿಎಂ ಸಿದ್ದರಾಮಯ್ಯ ಭೇಟಿ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
