ಬೆಂಗಳೂರು:
ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ: ಇಂದು ಬೆಳಗ್ಗೆ ವಿಧಾನಸೌಧ ಮುಂದೆ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವವರಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಅದರಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ.
ಅದಕ್ಕೂ ಮುನ್ನ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ನಾಯಕರನ್ನು ಸಿಎಂ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
