ಮೋದಿ ಸರ್ಕಾರ ಐದು ವರ್ಷ ಪೂರೈಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 

   ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ, ಪ್ರಧಾನಿ ನರೇಂದ್ರ ‌ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಪೂರೈಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭವಿಷ್ಯ ನುಡಿದರು.ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮಗೆ ಇರುವ ಮಾಹಿತಿ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅವಧಿ ಪೂರೈಸಲ್ಲ ಎಂದರು.

   ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿ ಏಕೆ ಇಟ್ಟುಕೊಂಡಿದ್ದಾರೆ? ಅವರನ್ನು ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡಲು ಇಟ್ಟುಕೊಂಡಿದ್ದಾರೆ. ಇಪ್ಪತ್ತು ಸಾವಿರ ಕೋಟಿ ಹಗರಣ ಆಗಿದೆ ಎಂದು ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದರು. ಆದರೂ ಯತ್ನಾಳ ವಿರುದ್ಧ ಏಕೆ ಕ್ರಮ ಆಗಿಲ್ಲ ಎಂದು ಪ್ರಶ್ನಿಸಿದರು.

   ಇದೇ ವೇಳೆ ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆರೋಪಿಸಿದ ಸಿಎಂ, ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ. ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ ಎಂದರು.

  ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗಾಂಧಿಗೆ ಬಿಜೆಪಿ‌ ಬೆದರಿಕೆ ಹಾಕಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರು, ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿ, ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಸುತ್ತಿದೆ ಎಂದರು.

Recent Articles

spot_img

Related Stories

Share via
Copy link
Powered by Social Snap