ಬೆಂಗಳೂರು:
ಕೆಲ ದಿನಗಳಿಂದ ರಾಜ್ಯದಲ್ಲಿ ಸುದ್ದಿಯಾಗಿರುವ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವ ಪ್ರಕರಣ ರಾಜಕೀಯವಾಗಿಯೂ ಚರ್ಚೆಗೆ ಗ್ರಾಸವಾಗಿರುವ ವಿಷಯ .ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ರೋಹಿಣಿ ಸಿಂಧೂರಿಯವರು ಡಿ ರೂಪ ಅವರ ವಿರುದ್ದ 1 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ.
ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿನ ಬಾಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ರೂಪಾ ವಿರುದ್ಧ ದೂರು ನೀಡಿದ್ದರು. ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ.
ಇದೀಗ ನಿನ್ನೆ ರೋಹಿಣಿ ಸಿಂಧೂರಿಯವರು ಕೋರ್ಟ್ ಮೆಟ್ಟಿಲೇರಿದ್ದು ಅವರ ಪರ ವಕೀಲರು ರೂಪಾ ಅವರಿಗೆ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. ಅಲ್ಲದೆ ನೊಟೀಸ್ ನಲ್ಲಿ ರೋಹಿಣಿ ಸಿಂಧೂರಿಯವರ ಮಾನಹಾನಿ ಮಾಡುವ ಫೋಟೋಗಳು, ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಿಂದ ತೆಗೆಯುವಂತೆ ರೂಪಾ ಅವರಿಗೆ ಸೂಚಿಸಿದ್ದು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ನೊಟೀಸ್ ನಲ್ಲಿ ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
