ಶಿರಾ:
ತಾಲ್ಲೂಕಿನ 42 ಗ್ರಾಮ ಪಂಚಾಯ್ತಿಗಳ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ದಂಡಾಧಿಕಾರಿ ಶ್ರೀಮತಿ ಮಮತಾ ಹೇಳಿದರು.
ನಗರದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿರಾ ತಾಲ್ಲೂಕಿನ ಗ್ರಾಮ ಪಂಚಾಯ್ತಿಗೆ 2ನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಈಗಾಗಲೇ ನ:30 ರಿಂಡ ಡಿ:31ರವರೆಗೆ ನೀತಿ ಸಂಹಿತೆಯು ಜಾರಿಯಲ್ಲಿದೆ ಎಂದರು.
ನಗರಸಭೆ, ,ಹಾ ನಗರ ಪಾಲಿಕೆಗಳ ವ್ಯಾಪ್ತಿಯನ್ನು ಹೊರತುಪಡಿಸಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಸ್ಥಳೀಯ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ಈ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ. 42 ಗ್ರಾ.ಪಂ.ಗಳಿಗೆ 42 ಮಮದಿ ಚುನಾವಣಾಧಿಕಾರಿಗಳು, 42 ಮಂದಿ ಸಹಾಯಕ ಚುನಾವಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದು ಒಟ್ಟು 357 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದರು.
ಒಟ್ಟು 660 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಡಿ:11 ರಿಂದ ನಾಮಪತ್ರ ಸಲ್ಲಿಕೆಯು 16ರವೆರೆಗೆ ನಡೆಯಲಿದೆ. ಈ 6 ದಿಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾನ್ಹ 3 ಗಂಟೆಯವರೆಗೂ ನಾಮಪತ್ರ ಸ್ವೀಕಾರ ನಡೆಯಲಿದೆ. ಡಿ:17 ರಿಂದ 19ರವರೆಗೆ ನಾಮಪತ್ರ ವಾಪಸ್ ಪಡೆಯಬಹುದಾಗಿದ್ದು ಡಿ:27 ರಂದು ಅವಿರೋಧವಾಗಿ ಆಯ್ಕೆಯಾಗದ ಕಣದಲ್ಲಿ ಉಳಿದ ಅಭ್ಯರ್ಥಿಗಳಿಗೆ ಚುನಾವಣೆ ನಡೆಸಲಾಗುವುದು. ಡಿ:30 ರಂದು ಮತ ಎಣಿಕೆ ನಡೆಯುವುದು ಎಂದು ತಹಶೀಲ್ದಾರ್ ಮಮತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
