ಶಿರಾ :
ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬಳಿ ಹೋಗುತ್ತಿದ್ದ ಎತ್ತಿನ ಗಾಡಿಗೆ ವಿದ್ಯುತ್ ಪ್ರವಹಿಸಿದ ಪರಿಣಾಮ ರಾಸು ಒಂದು ಸಾವನ್ನಪ್ಪಿದ್ದು, ಯುವಕನೊಬ್ಬ ಅಸ್ವಸ್ಥಗೊಂಡಿರುವ ಘಟನೆ ಶಿರಾ ನಗರದ ಕೇಶವ ನಗರ ಹೊಸ ಬಡಾವಣೆಯಲ್ಲಿ ಸೋಮವಾರ ಸಂಭವಿಸಿದೆ.
ನಗರದ ಮಹಮ್ಮದ್ ಅಬ್ಬಾಸ್ ಅಸ್ವಸ್ಥಗೊಂಡ ಯುವಕನಾಗಿದ್ದು, ನಗರದ ಕೊಳದಪ್ಪಳೆಶ್ವರ ದೇವಾಲಯದ ಬಳಿಯಲ್ಲಿ ಎತ್ತಿನಗಾಡಿಯಲ್ಲಿ ಕಬ್ಬಿಣದ ಪಟ್ಟಿಗೆಯನ್ನು ಸಾಗಿಸುತ್ತಿದ್ದಾಗ ರಸ್ತೆಯ ಸಮೀಪದಲ್ಲಿದ್ದ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನಿಂದ ವಿದ್ಯುತ್ ಪ್ರವಹಿಸಿದೆ. ವಿದ್ಯುತ್ ಶಾಕ್‍ನಿಂದಾಗಿ ಎತ್ತು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಡಿಮಯ ಮೇಲೆ ಕೂತಿದ್ದ ಹಮ್ಮದ್ ಅಬ್ಬಾಸ್‍ಗೆ ತೀವ್ರವಾದ ಗಾಯಗಳಾಗಿವೆ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಹಾಗೂ ಆರಕ್ಷಕ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
