ಶಿರಾ :
ಕಳೆದ ಎರಡು ವರ್ಷಗಳಿಂದಲೂ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಕಷ್ಟದಲ್ಲಿರುವಂತಹ ಸಂದರ್ಭದಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಮಾಡಬಾರದೆಂಬ ಕಾರಣಕ್ಕಾಗಿ ಈ ಬಾರಿ ಆ. 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳವಾಗಿಯೆ ಆಚರಿಸುವುದು ಅಗತ್ಯ ಎಂದು ಶಾಸಕ ಡಾ.ಸಿ.ಎಂರಾಜೇಶ್ಗೌಡ ಹೇಳಿದರು.
ಅವರು ನಗರದ ತಹಸೀಲ್ದಾರ್ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಧ್ವ್ವಜಾರೋಹಣ ನಡೆಯಲಿದೆ. ಅಂದು ಕೋವಿಡ್ ವಾರಿಯರ್ಸ್ಗಳಾದ ವಿವಿಧ ಇಲಾಖೆಯ ಸಿಬ್ಬಂದಿಗೆ ಅಭಿನಂದನೆ ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವುದು ಅಗತ್ಯ ಎಂದು ಶಾಸಕರು ತಿಳಿಸಿದರು.
ತಾಲ್ಲೂಕು ದಂಡಾಧಿಕಾರಿ ಮಮತಾ, ಬಿ.ಇ.ಓ. ಶಂಕರಪ್ಪ, ತಾ.ಪಂ. ಇ.ಓ. ಲಕ್ಷ್ಮಣ್, ನಗರ ಠಾಣಾ ಸಿ.ಪಿ.ಐ. ಹನುಮಂತರಾಯಪ್ಪ, ಗ್ರಾಮಾಂತರ ಠಾಣಾ ಸಿ.ಪಿ.ಐ. ರವಿಕುಮಾರ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ