ಶಿರಾ :
ತಾಲ್ಲೂಕಿನ ಬಂಗಾರಿಹಟ್ಟಿ ಸರ್ಕಾರಿ ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಸದರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬಂಗಾರಿಹಟ್ಟಿ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುವ ಸ್ಥಳದಲ್ಲಿಯೇ ವಿದ್ಯುತ್ ಹಾದು ಹೋಗಿರುವ ವಿದ್ಯುತ್ ತಂತಿಯ ಕಂಬ ಇದ್ದು ಯಾವ ಸಂದರ್ಭದಲ್ಲಾದರೂ ಅಪಾಯ ಸಂಭವಿಸಬಹುದಾಗಿದೆ. ಕೂಡಲೆ ಸ್ಥಳೀಯ ಗ್ರಾಪಂ ಆಡಳಿತ ಇಲ್ಲವೆ ತಾಲ್ಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ