ಶಿರಾ :
ಯುವತಿಯೊಬ್ಬಳ ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಶಿರಾ ಜ್ಯೋತಿ ನಗರ ಬಡಾವಣೆಯ ಮೋಹನ್‍ಕುಮಾರ್(25) ಎಂಬ ಯುವಕ ತಾನು ಪ್ರೀತಿಸಿದ ಯುವತಿಯೊಬ್ಬಳ ವಿಚಾರಕ್ಕೆ ಸಂಬಂಧಿಸಿದಂತೆ ಡೆತ್ ನೋಟ್‍ವೊಂದನ್ನು ಬರೆದಿಟ್ಟು ಶಿರಾ ನಗರದ ಎ.ಪಿ.ಎಂ.ಸಿ. ಆವರಣದ ಮರವೊಂದಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.
ಈ ಸಂಬಂಧ ನಗರ ಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
