ಬರಗೂರು :
ಹೊಲದಲ್ಲಿ ಕಳೆ ಕೀಳುವಾಗ ರೈತ ಮಹಿಳೆಯೊಬ್ಬರಿಗೆ ಹಾವು ಕಚ್ಚಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮದ್ಯೆ ಸಾವನ್ನಪ್ಪಿರುವ ಘಟನೆ ಶಿರಾ ತಾಲ್ಲೂಕು ಹುಲಿಕುಂಟೆ ಹೋಬಳಿಯ ಬರಗೂರು ಗ್ರಾಮದಲ್ಲಿ ಸೆ.16 ರಂದು ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಬರಗೂರು ಗ್ರಾಮದ ತಿಪ್ಪೇಸ್ವಾಮಿ ಅವರ ಪತ್ನಿ ಶಿವಮ್ಮ (55) ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮೃತರಿಗೆ ನಾಲ್ಕು ಮಂದಿ ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳಿಗೆ ವಿವಾಹವಾಗಿದೆ. ಮನೆಯಲ್ಲಿರುವ ಇನ್ನಿಬ್ಬರು ಮಕ್ಕಳಲ್ಲಿ ಓರ್ವ ಹೆಣ್ಣು ಮಗಳಿದ್ದು, ಓರ್ವ ವಿಕಲ ಚೇತನ ಗಂಡು ಮಗು ಇದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಎಸ್‍ಐ ಕೃಷ್ಣ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕುಟುಂಬಕ್ಕೆ ಆರ್ಥಿಕ ನೆರವು :
ಮೃತ ಮಹಿಳೆಯ ಕುಟುಂಬಕ್ಕೆ ಭೇಟಿ ನೀಡಿದ ರಾಜ್ಯ ತೆಂಗು-ನಾರು ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಅವರು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ ವೈಯಕ್ತಿಕವಾಗಿ ಹಣ ಸಹಾಯ ಮಾಡಿದರಲ್ಲದೇ ಸರ್ಕಾರದಿಂದ ಬರುವ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬರಗೂರು ಬಿ.ಎನ್.ತಿಪ್ಪೇಸ್ವಾಮಿ, ಯುವ ಮುಖಂಡರಾದ ಬಿ.ಎಸ್.ಸಿದ್ದೇಶ್, ಯುವರಾಜು, ದೇವರಾಜ ಅರಸ್, ನಟರಾಜು, ಕೃಷ್ಣಪ್ಪ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
