ಶಿರಾ:
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳ ಮೂಲಕ ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೋವಿಡ್-19 ಹಿನ್ನೆಲೆಯಲ್ಲಿ ಪಿಪಿಇ ಕಿಟ್‍ಗಳನ್ನು ಉಚಿತವಾಗಿ ನೀಡಲಾಯಿತು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್‍ಗಳನ್ನು ನೀಡುತ್ತಿದ್ದು ಈ ಸಂಬಂಧ ಪ್ರೊ.ಕೆ.ಚಂದ್ರಣ್ಣ ಅವರ ಮುಖಾಂತರ ತಾಲ್ಲೂಕು ಆಡಳಿತಕ್ಕೆ ಕಿಟ್‍ಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿತ್ತು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್.ನಾಗಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಹಂತದಲ್ಲಿ ತಲಾ 30 ಪಿ.ಪಿ.ಇ. ಕಿಟ್‍ಗಳನ್ನು ನೀಡಲಾಗಿದ್ದು, ಇದೀಗ ಪ್ರತಿ ಆಸ್ಪತ್ರೆಗಳಿಗೆ ಎರಡನೆಯ ಹಂತದಲ್ಲಿ 10 ಕಿಟ್‍ಗಳಂತೆ ನೀಡಲಾಗುತ್ತಿದೆ ಎಂದರು.
ರೆಡ್‍ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ವ್ಯವಸ್ಥಾಪಕ ಎಸ್.ಕೆ.ರಾಮಚಂದ್ರಗುಪ್ತ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಶಿರಾ ತಾಲ್ಲೂಕಿನಲ್ಲೆ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಸಿ ಯಶಸ್ವಿಗೊಳಿಸಲಾಗಿದೆ. ನಮ್ಮ ಸಂಸ್ಥೆಯ ವತಿಯಿಂದ ಇಡೀ ಜಿಲ್ಲೆಯಲ್ಲಿ ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯವಿದ್ದವರಿಗೆ ತುಮಕೂರು ನಗರದಲ್ಲಿ ಮನೆ ಮನೆಗೆ ನೇರವಾಗಿ ಉಚಿತ ಔಷಧಿ-ಮಾತ್ರೆಗಳನ್ನು ಪೂರೈಸಲಾಗಿದೆ ಎಂದರು.
ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್‍ಜಮ್ ಹಾಗೂ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಕ ಚಂದ್ರಪ್ಪ ಪಿಪಿಇ ಕಿಟ್‍ಗಳನ್ನು ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ