ಶಿರಾ :
ಮೊಬೈಲ್‍ನಲ್ಲೆ ಸೆಲ್ಫಿ ಫೋಟೋ ತೆಗೆದುಕೊಳ್ಳುವ ಸಮಯದಲ್ಲಿ ಅಕ್ಕ-ತಂಗಿಯರಿಬ್ಬರು ಕೆÀರೆಗೆ ಕಾಲು ಜಾರಿ ಬಿದ್ದು ಸಾವನ್ನಪಿರುವ ದುರ್ಘಟನೆ ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯ ಬಳಿ ಭಾನುವಾರ ನಡೆದಿದೆ.
ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯು ಹೇಮಾವತಿ ನೀರಿನಿಂದ ಭರ್ತಿಯಾಗಿದ್ದು, ಇದೇ ಗ್ರಾಮದ ಶಿಲ್ಪ(18) ಮತ್ತು ತಂಗಿ ಸುಶ್ಮಿತ(16) ಈ ಇಬ್ಬರೂ ಕೆರೆಯ ಬಳಿ ಒಂದು ಸೆಲ್ಫಿ ಫೋಟೊ ತೆಗೆದುಕೊಂಡು ಬರುತ್ತೇವೆ ಎಂದು ಅವರ ತಾಯಿಗೆ ಹೇಳಿ ಹೋಗಿದ್ದರು ಎನ್ನಲಾಗಿದೆ.
ಕೆರೆಯ ದಡದ ಬಳಿ ನಿಂತು ಸೆಲ್ಫಿ ಫೋಟೋ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಬಿದ್ದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತಪಟ್ಟ ಈರ್ವರಲ್ಲಿ ಒಬ್ಬಳಾದ ಶಿಲ್ಪಾರಿಗೆ ಭಾನುವಾರವೆ ನಿಶ್ಚಿತಾರ್ಥ ಕೂಡ ಇತ್ತು ಎನ್ನಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ