ಡಿಸೆಂಬರ್ 2ರಿಂದ ಕುಮಟಾ- ಶಿರಸಿ ರಸ್ತೆ ಸಂಚಾರ ಬಂದ್

ಶಿರಸಿ:

   ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

   ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Recent Articles

spot_img

Related Stories

Share via
Copy link