ನವದೆಹಲಿ:
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ ದೆಹಲಿ ನ್ಯಾಯಾಲಯ, ಮಾರ್ಚ್ 31ಕ್ಕೆ ತೀರ್ಪು ಕಾಯ್ದಿರಿಸಿದೆ.
ಪ್ರಕರಣದಲ್ಲಿ ತನ್ನ ವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಕಿರು ಟಿಪ್ಪಣಿಯನ್ನು ಹಸ್ತಾಂತರಿಸಿದ ನಂತರ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ನಿಯಮಿತ ಜಾಮೀನು ನೀಡುವ ಕುರಿತು ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.
ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ, ಅವರು ‘ಹಿಂದೆಂದೂ ಕಂಡಿಲ್ಲದ’ 18 ಸಚಿವಾಲಯಗಳೊಂದಿಗೆ ವ್ಯವಹರಿಸಿದ್ದಾರೆ ಮತ್ತು ಅವರು ವಿದೇಶಕ್ಕೆ ತೆರಳುವುದಿಲ್ಲವಾದರೂ, ಅವರು ಖಂಡಿತವಾಗಿಯೂ ಸಾಕ್ಷ್ಯ ನಾಶದ ಅಪಾಯವನ್ನು ಹೊಂದಿದ್ದಾರೆ ಎಂದು ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ