ಬೆಂಗಳೂರು :
ಬಹುಕೋಟಿ ವಂಚನೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಇಬ್ಬರೂ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದು, ಇತ್ತ ವಿಶೇಷ ತನಿಖಾ ತಂಡ(ಎಸ್ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಮನ್ಸೂರ್ ಖಾನ್ ಜೊತೆ ಇಬ್ಬರೂ ವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಮಧ್ಯೆ ಐಎಂಎ ಕಂಪನಿಯ ಲೆಕ್ಕ ಪರಿಶೋಧಕ ಇಕ್ಬಾಲ್ ಖಾನ್ರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಕಂಪನಿಗಳ ರಿಜಿಸ್ಟ್ರಾರ್ ಗೆ ತಪ್ಪು ಮಾಹಿತಿ ನೀಡಿದ ಆರೋಪ ಆಡಿಟರ್ ಮೇಲಿದೆ.
ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಇಡಿ ಅಧಿಕಾರಿಗಳು ಹಾಕುತ್ತಿರುವ ಪ್ರಶ್ನೆಗಳಿಗೆ ಆರೋಪಿ ಮನ್ಸೂರ್ ಖಾನ್ ತಬ್ಬಿಬ್ಬಾಗಿ ಪ್ರಕರಣದ ಹಿಂದೆ ಇರುವ ಕಾಣದ ಕೈಗಳ ಹೆಸರನ್ನು ಬಾಯಿಬಿಟ್ಟಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/Jameer-Roshan.gif)