ಸ್ಕೊಡ್‌ವೆಸ್ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿ

ಶಿರಸಿ:

   ಬೆಂಗಳೂರಿನಲ್ಲಿ ಆಗಸ್ಟ್ 13 ರಿಂದ 15 ರವರೆಗೆ ನಡೆಯುತ್ತಿರುವ 17 ನೇ ರಾಷ್ಟ್ರೀಯ ಕೌಶಲ್ಯ ಸಮಾವೇಶದಲ್ಲಿ ಶಿರಸಿಯ ಸ್ಕೊಡ್‌ವೆಸ್ ಸಂಸ್ಥೆಯು ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಗುರುತಿಸಿ ಬೆಂಗಳೂರಿನ FVTRS ಸಂಸ್ಥೆಯು ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ಕೊಡ್‌ವೆಸ್ ಸಂಸ್ಥೆಯು ಶಾಲೆ ತೊರೆದ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಒದಗಿಸಿ ಅವರ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಡುತ್ತಿರುವುದು ಶ್ಲಾಘನೀಯವಾಗಿದೆ. ಕೇವಲ ಕೌಶಲ್ಯಾಭಿವೃದ್ಧಿ ಕ್ಷೇತ್ರ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಕೃಷಿ, ಬುಡಕಟ್ಟು, ಮಹಿಳಾ ಸಶಕ್ತೀಕರಣ, ಪರಿಸರ ಮತ್ತು ವಿಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಯು ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ.

Recent Articles

spot_img

Related Stories

Share via
Copy link