ಎಸ್ ಎಂ ಕೃಷ್ಣ ಅಂತಿಮ ಸಂಸ್ಕಾರ: ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ: ಎಸ್ ಎಂ ಕೃಷ್ಣ ಕುಟುಂಬ

ಬೆಂಗಳೂರು:

     ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಬುಧವಾರ ಸಂಜೆ ನಡೆಯಲಿದೆ.

    ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

    ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಲಿದೆ,

    ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಸೋಮನಹಳ್ಳಿಗೆ ಆಗಮಿಸಿ, ಸಿದ್ಧತೆಗಳ ಪರಿಶೀಲನೆ ನಡೆಸಿದರು.

    ಈ ವೇಳೆ ಮಾತನಾಡಿದ ಅವರು, ಬೆಳಗ್ಗೆ 8 ಗಂಟೆಯವರೆಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. 8 ಗಂಟೆಗೆ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ತರಲಾಗುತ್ತದೆ.

    ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನ ಪಡೆಯಬಹುದು ಎಂದು ಹೇಳಿದರು

Recent Articles

spot_img

Related Stories

Share via
Copy link