ಬೆಂಗಳೂರು:
ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.
ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮಾನ್ ಭಾರತ್ ಯೋಜನೆ, ಮುದ್ರಾ ಯೋಜನೆ, ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ಧಿ ಮಾಡಿದೆ ಎಂದರು.
ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ, ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು. ದೇಶಕ್ಕೆ ತನ್ನದೇ ಅದ ಪರಂಪರೆ, ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗ ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.