ತುಮಕೂರು:
ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಗುರುವಾರ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಪತ್ನಿ ಶೈಲಜಾ ಸೋಮಣ್ಣ ಅವರೊಂದಿಗೆ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ಈ ಕುರಿತು ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ವಿ. ಸೋಮಣ್ಣ ಅವರು 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವುದೇ ನಮ್ಮ ಜೀವಿತಾವಧಿಯ ಪುಣ್ಯ ಎನ್ನಲು ಹೆಮ್ಮೆಯೆನಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕವಾಗಿ ಜಗದ್ವಿಖ್ಯಾತವಾದ ಈ ಆಚರಣೆಯ ಪುಣ್ಯದಿಂದ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದ್ದಾರೆ.
