ರಾಜಾಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ನಾಮ ಪತ್ರ ಸಲ್ಲಿಕೆ….!

ನವದೆಹಲಿ:

    ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ  ನಾಮಪತ್ರ ಸಲ್ಲಿಸಿದ್ದಾರೆ.

    ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿರಲಿದ್ದಾರೆ.

   ಮಗ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರರು ಬರಮಾಡಿಕೊಂಡರು.

   ನಾಮಪತ್ರ ಸಲ್ಲಿಸಲು ಸೋನಿಯಾ ಗಾಂಧಿ ಇಲ್ಲಿನ ವಿಧಾನಸಭಾ ಭವನಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಕ್ಷವು ರಾಜ್ಯದಿಂದ ಒಂದು ರಾಜ್ಯಸಭಾ ಸ್ಥಾನವನ್ನು ಗೆಲ್ಲುವುದು ಖಚಿತವಾಗಿದೆ ಮತ್ತು ಐದು ಬಾರಿ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿದ ನಂತರ ಮೇಲ್ಮನೆಗೆ ಸೋನಿಯಾ ಆಯ್ಕೆಯಾಗಲಿದ್ದಾರೆ. 

    ಇದೇ ವೇಳೆ ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಬುಧವಾರ) ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಣಕ್ಕಿಳಿದರೆ, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರು ಸ್ಪರ್ಧಿಸಲಿದ್ದಾರೆ.

  ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಇತ್ತ ಬಿಜೆಪಿ ಕೂಡ ಈಗಾಗಲೇ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆದರೂ ಕಾಂಗ್ರೆಸ್ ತನ್ನ ಯಾವುದೇ ಅಭ್ಯರ್ಥಿಗಳ ಪಟ್ಟಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap