ಬಡ ಕುಟುಂಬದ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂಪಾಯಿಗಳನ್ನು ನೀಡಲಿದೆ : ಸೋನಿಯಾ ಗಾಂಧಿ

ನವದೆಹಲಿ

    ಲೋಕಸಭಾ ಚುನಾವಣೆ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳ ಕುರಿತು ಸೋನಿಯಾ ಗಾಂಧಿ ಮಾತನಾಡಿರುವ ವಿಡಿಯೋವನ್ನು ಕಾಂಗ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. “ತೀವ್ರ ಬಿಕ್ಕಟ್ಟಿನ” ಹಿನ್ನೆಲೆಯಲ್ಲಿ ದೇಶದ ಮಹಿಳೆಯರು ಕಠಿಣ ಸಮಯವನ್ನು ಎದುರಿಸುತ್ತಿದ್ದು, ಪಕ್ಷದ ‘ಮಹಾಲಕ್ಷ್ಮಿ ಯೋಜನೆ’ ಅವರ ಜೀವನವನ್ನು ಬದಲಾಯಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    “ನನ್ನ ಪ್ರೀತಿಯ ಸಹೋದರಿಯರೇ, ಸ್ವಾತಂತ್ರ್ಯ ಹೋರಾಟದಿಂದ ಆಧುನಿಕ ಭಾರತ ನಿರ್ಮಾಣದವರೆಗೆ ಮಹಿಳೆಯರು ಅಪಾರ ಕೊಡುಗೆ ನೀಡಿದ್ದಾರೆ. ಆದರೆ, ಇಂದು ನಮ್ಮ ಮಹಿಳೆಯರು ತೀವ್ರ ಹಣದುಬ್ಬರದ ನಡುವೆ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಅವರ ಶ್ರಮ ಮತ್ತು ತಪಸ್ಸಿಗೆ ನ್ಯಾಯ ಸಲ್ಲಿಸಲು ಕ್ರಾಂತಿಕಾರಿ ಭರವಸೆಯೊಂದಿಗೆ ಕಾಂಗ್ರೆಸ್ ಬಂದಿದೆ ಎಂದು “ಸೋನಿಯಾ ಗಾಂಧಿ ತಿಳಿಸಿದ್ದಾರೆ.

    “ಕಾಂಗ್ರೆಸ್‌ನ ‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂಪಾಯಿಗಳನ್ನು ನೀಡಲಿದೆ ಎಂದು” ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

    ಒಟ್ಟು ಏಳು ಹಂತದ ಸಾರ್ವತ್ರಿಕ ಚುನಾವಣೆಯ ಪೈಕಿ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮತ ಚಲಾಯಿಸುವ ಜನರಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.

   ಕಾಂಗ್ರೆಸ್‌ನ “ಗ್ಯಾರಂಟಿ” ಯೋಜನೆಗಳು ಈಗಾಗಲೇ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕೋಟ್ಯಂತರ ಕುಟುಂಬಗಳ ಜೀವನವನ್ನು ಬದಲಾಯಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ದಕ್ಷಿಣದ ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.

   ಇನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ತಾಯಿಯ ಸಂದೇಶವನ್ನು ಹಂಚಿಕೊಂಡಿದ್ದು, “ಬಡ ಕುಟುಂಬದ ಮಹಿಳೆಯರೇ ನೆನಪಿಸಿಕೊಳ್ಳಿ – ನಿಮ್ಮ ಒಂದು ಮತದಿಂದ ನಿಮ್ಮ ಖಾತೆಯಲ್ಲಿ ವರ್ಷಕ್ಕೆ 1 ಲಕ್ಷ ರೂ. ಜಮೆಯಾಗದೆ ಎಂದು ಬರೆದುಕೊಂಡಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap