ಬೆಂಗಳೂರು
ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನಿಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರ ಪಕ್ಷಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.
ನಮ್ಮ ತಂಡವು 67 ಕ್ಷೇತ್ರಗಳಲ್ಲಿ ಸಂಚರಿಸಲಿದೆ. ರಥಯಾತ್ರೆ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ನ ಎ ಟೀಂ ಮತ್ತು ಬಿ ಟೀಮನ್ನು ಮನೆಗೆ ಕಳುಹಿಸಿ ಬಿಜೆಪಿಯನ್ನು ಜನರು ಗೆಲ್ಲಿಸಲಿದ್ದಾರೆ. ನರೇಂದ್ರ ಮೋದಿಜಿ ಅವರ ಅಭಿವೃದ್ಧಿ ಕಾರ್ಯಗಳು ಇದಕ್ಕೆ ಪೂರಕ ಎಂದು ಅವರು ವಿಶ್ಲೇಷಿಸಿದರು.
ಕಾಂಗ್ರೆಸ್ಸಿನ ಕೇಂದ್ರ ಸರಕಾರ ಕೊಡುತ್ತಿದ್ದ ಹಣದ ನಾಲ್ಕೆöÊದು ಪಟ್ಟು ಹೆಚ್ಚು ಹಣವನ್ನು ಮೋದಿ ಸರಕಾರ ನೀಡುತ್ತಿದೆ. ಡಬಲ್ ಎಂಜಿನ್ ಸರಕಾರ ಇದ್ದರೆ ಹೆಚ್ಚು ಅಭಿವೃದ್ಧಿ ಸಾಧ್ಯ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇನ್ನೊಂದು ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬರಲಿದೆ ಎಂದರಲ್ಲದೆ, ದೇಶದ ಈಶಾನ್ಯ ಭಾಗ ಸೇರಿ ಎಲ್ಲೆಡೆ ಬಿಜೆಪಿ ಜಯಭೇರಿ ಬಾರಿಸುತ್ತಿದೆ.
ಕರ್ನಾಟಕದಲ್ಲೂ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಂದಿನ ಯಾತ್ರೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಡಾ. ಅಶ್ವತ್ಥನಾರಾಯಣ್, ಯೋಗೇಶ್ವರ್ ಅವರು ಈ ರಥಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಉತ್ತರ ಪ್ರದೇಶದಲ್ಲೂ ರಥಯಾತ್ರೆ ಮೂಲಕ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್- ಜೆಡಿಎಸ್ ಯಾತ್ರೆಗಳು ಅಂತ್ಯಗೊAಡಿವೆ. ನಮ್ಮ 4 ತಂಡಗಳ ರಥಯಾತ್ರೆ ನಡೆದಿದೆ ಎಂದರು.
ಪಕ್ಷ ಹಿಂದೆ ಇರುವಲ್ಲಿ ಹೆಚ್ಚು ಆದ್ಯತೆ ಕೊಡಲಿದ್ದೇವೆ ಎಂದ ಅವರು, ವಿಧಾನಸೌಧದ ಬದಲಾಗಿ ಹೋಟೆಲ್ನಿಂದ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಅವರಿಂದ ನಾವೇನೂ ಪಾಠ ಕಲಿಯಬೇಕಾಗಿಲ್ಲ. ಸಿದ್ದರಾಮಯ್ಯ- ಕುಮಾರಸ್ವಾಮಿ ಆಡಳಿತದಲ್ಲಿದ್ದಾಗ ಸಿಎಂ, ಶಾಸಕರ ಮೇಲೆ 70ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಲೋಕಾಯುಕ್ತವನ್ನೇ ಮುಚ್ಚಿ ಪ್ರಕರಣದ ತನಿಖೆ ಮಾಡದಂತೆ ನೋಡಿಕೊಂಡರು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ