ಶೀಘ್ರದಲ್ಲಿ ಎರಡನೆ ಪಟ್ಟಿ ಪ್ರಕಟಿಸಲಾಗುವುದು : ಡಿ ಕೆ ಶಿವಕುಮಾರ್‌

ಬೆಂಗಳೂರು

     ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವಾಗ  ಕಾಂಗ್ರೆಸ್ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

    ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ತಿಳಿಸಿದರು.

    ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ.

Recent Articles

spot_img

Related Stories

Share via
Copy link
Powered by Social Snap