ಸರ್ಕಾರದಿಂದ ಶೀರ್ಘದಲ್ಲಿಯೇ ಮಹತ್ವದ ನಿರ್ಧಾರ : ಸಿಎಂ

ಬೆಂಗಳೂರು:

     ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

    ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಧರಣಿ ಮಾಡಿದ್ದಕ್ಕೆ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಆದರೆ ಅವರು ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

    ಈ ಮಧ್ಯೆ ಇಂದು ಮಧ್ಯಾಹ್ನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಗೃಹ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

    ಕನ್ನಡ ನಾಮಫಲ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವು ಶಾಪಿಂಗ್ ಸೆಂಟರ್ ಗಳ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದ್ದರು.

    ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Recent Articles

spot_img

Related Stories

Share via
Copy link
Powered by Social Snap