ಇಂದಿನಿಂದ ಪ್ರಧಾನಿ ಮೋದಿ ಎರಡು ದಿನ ಸೌದಿ ಅರೇಬಿಯಾ ಭೇಟಿ

ನವದೆಹಲಿ:

    ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ಭೇಟಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿದ್ದಾರೆ. ಸೌದಿ ಅರೇಬಿಯಾದ ರಾಜಕುಮಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಅವರು ಇಂದಿನಿಂದ ಎರಡು ದಿನಗಳವರೆಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ.

   ಇನ್ನು ತೆರಳುವ ಮುನ್ನ ತಮ್ಮ ಸೌದಿ ಅರೇಬಿಯಾ ಪ್ರವಾಸಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾ ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಮತ್ತು ಜನರಿಂದ ಜನರಿಗೆ ಸಂಬಂಧಗಳ ಕ್ಷೇತ್ರಗಳಲ್ಲಿ ಪರಸ್ಪರ ಪ್ರಯೋಜನಕಾರಿ ಮತ್ತು ಗಣನೀಯ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

Recent Articles

spot_img

Related Stories

Share via
Copy link