T20 ವಿಶ್ವ ಕಪ್‌ : ಫೈನಲ್‌ ತಲುಪಿದ ದಕ್ಷಿಣ ಆಫ್ರಿಕಾ ತಂಡ

 

     T20 ವಿಶ್ವಕಪ್​ನ ಮೊದಲ ಸೆಮಿಫೈನಲ್ 1 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ 9 ವಿಕೆಟ್ ಗಳಿಂದ ಗೆಲುವು ಸಾಧಿಸಿ ದಕ್ಷಿಣ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶಿಸಿದೆ. ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಸೌತ್ ಆಫ್ರಿಕಾ ತಂಡದ ಮೊದಲ ಸೆಮಿಫೈನಲ್ ಗೆಲುವಾಗಿದೆ. 1992 ರಿಂದ ವಿಶ್ವಕಪ್​ ನಲ್ಲಿ ಆಫ್ರಿಕನ್ನರು ಒಮ್ಮೆಯೂ ಫೈನಲ್ ಪ್ರವೇಶಿಸಿರಲಿಲ್ಲ.

    ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಮೊದಲ ಓವರ್​ನಿಂದಲೇ ಸಂಘಟಿತವಾಗಿ ದಕ್ಷಿಣ ಆಫ್ರಿಕಾ ತಂಡದ ಬೌಲರ್​ಗಳು ಆರಂಭದಲ್ಲಿಯೇ ಗೆಲುವು ಸಾಧಿಸುತ್ತಾ ಹೋದರು. 

    ಆ ಬಳಿಕ ಬಂದ ಕರೀಮ್ ಜನ್ನತ್ (8) ಮತ್ತು ರಶೀದ್ ಖಾನ್ (8) ಅಲ್ಪ ಹೊತ್ತು ಕ್ರೀಸ್​ನಲ್ಲಿದ್ದರು. ಇವರಿಬ್ಬರ ಪತನದೊಂದಿಗೆ ಪೆವಿಲಿಯನ್ ಪರೇಡ್ ಮುಂದುವರೆಸಿದ ಅಫ್ಘಾನಿಸ್ತಾನ್ ತಂಡ 11.5 ಓವರ್​ಗಳಲ್ಲಿ 56 ರನ್​ಗಳಿಸಿ ಆಲೌಟ್ ಆಯಿತು.

   ಸೌತ್ ಆಫ್ರಿಕಾ ಪರ ತಬ್ರೇಝ್ ಶಂಸಿ ಹಾಗೂ ಮಾರ್ಕೊ ಯಾನ್ಸೆನ್ ತಲಾ 3 ವಿಕೆಟ್ ಪಡೆದರೆ, ಕಗಿಸೊ ರಬಾಡ ಹಾಗೂ ಅನ್ರಿಕ್ ನೋಕಿಯಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.ನಾಡಿದ್ದು ಭಾನುವಾರ ಜೂನ್ 29 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಅಥವಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap