ಬೆಳಗಾವಿ:
ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತಾದಿಗಳಿಗೆ ಗುಡ್ನ್ಯೂಸ್ ಕೊಡಲಾಗಿದೆ. ಬೆಳಗಾವಿ ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತಾದಿಗಳು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅಲ್ಲದೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನಷ್ಟು ಸೇವೆಗಳನ್ನು ಪರಿಚಯಿಸಿದೆ. ಅದರ ವಿವರ ಇಲ್ಲಿದೆ.
ಭಾರತ ಹುಣ್ಣಿಮೆಯ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸೌದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆಬ್ರವರಿ 12ರಂದು ಬುಧವಾರ ಹುಣ್ಣಿಮೆಯ ದಿನ ರಥೋತ್ಸವದ ಮುಖ್ಯ ದಿನಾವಾಗಿದೆ. ಈ ಜಾತ್ರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳು, ಅಕ್ಕ ಪಕ್ಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ. ರಥೋತ್ಸವದ ಮುನ್ನಾ ದಿನಗಳಿಂದ ಆರಂಭವಾಗಿ ನಂತರದಲ್ಲಿ ದೇವಿಯ ವಾರದ ದಿನಗಳಾದ ಮಂಗಳವಾರ ಮತ್ತು ಶುಕ್ರವಾರಗಳಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳ ಪ್ರಯಾಣ ನಿರೀಕ್ಷಿಸಲಾಗಿದೆ.
ಭಕ್ತಾದಿಗಳು ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಫೆಬ್ರವರಿ 9ರಿಂದ ಫೆಬ್ರವರಿ 14 ರವರೆಗೆ ಹಾಗೂ ನಂತರದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರದ ದಿನ ಫೆಬ್ರವರಿ 18, 21,25 ಹಾಗೂ 28 ರಂದು ಹುಬ್ಬಳ್ಳಿ ಮತ್ತು ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡುವ ಮೂಲಕ ಗುಡ್ನ್ಯೂಸ್ ಕೊಡಲಾಗಿದೆ. ಇದಕ್ಕಾಗಿ 60 ಬಸ್ಗಳು, 150 ಚಾಲಕರು- ನಿರ್ವಾಹಕರು, ಮೇಲ್ವಿಚಾರಣೆಗಾಗಿ 8 ಅಧಿಕಾರಿಗಳು ಹಾಗೂ 22 ಸಿಬ್ಬಂದಿಗಳನ್ನು ನಿಯೋಜಿಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದೂ ಹೇಳಲಾಗಿದೆ. ಬಸ್ ಹೊರಡುವ ಸ್ಥಳ ಹಾಗೂ ಸಂಚಾರ ಮಾರ್ಗದ ವಿವರ * ಹುಬ್ಬಳ್ಳಿಯಲ್ಲಿ ಜಾತ್ರೆ ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ಆಯಾ ಬಸ್ ನಿಲ್ದಾಣಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ. ಪ್ರಯಾಣಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಹೊಸೂರು ಬಸ್ ನಿಲ್ದಾಣ: 7760991662 / 7760991685 | ಗೋಕುಲ ರಸ್ತೆ ಬಸ್ ನಿಲ್ದಾಣ : 7760991682 | ನವಲಗುಂದ : 9663299001