ರೇಣುಕಾ ಸ್ವಾಮಿ ಪ್ರಕರಣ : ವಿಶೇಷ ಆಂತರಿಕ ತಂಡ ರಚನೆ …!

ಬೆಂಗಳೂರು:

    ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಆಂತರಿಕ ವಿಶೇಷ ತನಿಖಾ ತಂಡ ವನ್ನು ರಚನೆ ಮಾಡಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು, ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್ ಗಿರೀಶ್ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಿಜಯನಗರ ಸಹಾಯಕ ಪೊಲೀಸ್ ಆಯುಕ್ತ ಚಂದನ್ ಅವರನ್ನು ಮುಖ್ಯ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಈ ಆಂತರಿಕ ವಿಶೇಷ ತನಿಖಾ ತಂಡದಲ್ಲಿ ತನಿಖೆಗೆ ಸಹಾಯಕವಾಗಲು ಇನ್‌ಸ್ಪೆಕ್ಟರ್‌ಗಳು, ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link