ಜಯಲಲಿತ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ…!

ಬೆಂಗಳೂರು:

      1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ.

    ಜಯಲಲಿತಾ ಮತ್ತು ಇತರರ ಪ್ರಕರಣದಲ್ಲಿ ವಶಪಡಿಸಿಕೊಂಡ ಆಸ್ತಿಗಳ ವಿಲೇವಾರಿ ಕುರಿತು ಕರ್ನಾಟಕ ರಾಜ್ಯದ ಪರವಾಗಿ ನಗರದ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಕಿರಣ್ ಎಸ್ ಜವಳಿ ಅವರನ್ನು ಎಸ್‌ಪಿಪಿಯಾಗಿ ನೇಮಿಸಲಾಗಿದೆ.

    ಡಿಸೆಂಬರ್ 1996 ರಲ್ಲಿ ಜಯಲಲಿತಾ ಅವರ ಪೋಸ್ ಗಾರ್ಡೆನ್ ನಿವಾಸದಿಂದ ಏಳು ಕೆ.ಜಿ ತೂಕದ ಚಿನ್ನ, ವಜ್ರಖಚಿತ ಆಭರಣಗಳು, ಸುಮಾರು 700 ಕೆಜಿ ತೂಕದ ಬೆಳ್ಳಿ ಆಭರಣಗಳು, 11,344 ಸೀರೆಗಳು, 250 ಶಾಲುಗಳು, 750 ದುಬಾರಿ ಪಾದರಕ್ಷೆಗಳು, 12 ರೆಫ್ರಿಜರೇಟರ್‌ಗಳು, 44 ಹವಾನಿಯಂತ್ರಿತ ಯಂತ್ರಗಳು 91 ಕೈಗಡಿಯಾರಗಳು, ನಗದು ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. 

 

    ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನುಪಸ್ಥಿತಿಯಲ್ಲಿ ವಶಪಡಿಸಿಕೊಂಡ ಆಸ್ತಿಗಳನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಈ ಸಂಬಂಧ ಸಿಬಿಐ ನ್ಯಾಯಾಲಯವು ಅಕ್ಟೋಬರ್ 2022 ರಲ್ಲಿ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿತ್ತು.

    ಜಯಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸುವಂತೆ ಕರ್ನಾಟಕ ಗೃಹ ಕಾರ್ಯದರ್ಶಿಗೆ ಬರೆದ ಪತ್ರವನ್ನು ಆಧರಿಸಿ ರಾಜ್ಯ ಕಾನೂನು ಇಲಾಖೆ ಮಾರ್ಚ್ 27ರಂದು ಆದೇಶ ಹೊರಡಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap